ಆರ್.ಟಿ.ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ: ಎಸ್.ಐ.ಓ ಒತ್ತಾಯ

ಹೈದರಾಬಾದ್: ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ (ಆರ್.ಟಿ.ಈ) ಯ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಹಾಗೂ ದೇಶದ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ (ಎಸ್.ಐ.ಓ) ಒತ್ತಾಯಿಸಿದೆ.

ಹೈದರಾಬಾದ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ಟೂಡೆಂಟ್ಸ್ ಮ್ಯಾನಿಫೆಸ್ಟೋವನ್ನು ಬಿಡುಗಡೆ ಮಾಡಿದ ಎಸ್ ಐ ಓ, ದೇಶದ ಹಲವಾರು ರಾಜ್ಯಗಳಲ್ಲಿ ಆರ್ ಟಿ ಈ ಕಾಯಿದೆಯನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನಕ್ಕೆ ತರಲಾಗುತ್ತಿಲ್ಲ.

ಜೊತೆಗೆ ದೇಶದ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ವಿವಿಧ ವಿಷಯಗಳಿಗೆ ಉಪನ್ಯಾಸ ಮಾಡಲು ಉಪನ್ಯಾಸಕರ ಹುದ್ದೆಗಳು ಖಾಲಿ ಬಿದ್ದಿವೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಖಾಲಿ ಇರುವ ಹುದ್ದೆಗಳಿಗೆ ಶೀಘ್ರವಾಗಿ ಭರ್ತಿ ಮಾಡಬೇಕೆಂದು ಆಗ್ರಹಿಸಿದೆ.

ಪ್ರತ್ಯೇಕ ತೆಲಂಗಾಣ ರಾಜ್ಯದ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ವಿದ್ಯಾರ್ಥಿ ಆಂದೋಲನವನ್ನು ರಾಜ್ಯ ವಿಭಜನೆಯಾದ ನಂತರ ಸಂಪೂರ್ಣವಾಗಿ ಮರೆತು ಬಿಡಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Check Also

‘ಪ್ರವಾದಿ ಮುಹಮ್ಮದ್ ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ’ ಪುಸ್ತಕ ಲೋಕಾರ್ಪಣೆ

ಮಂಗಳೂರು, ನ.15: ‘ಪ್ರವಾದಿ ಮುಹಮ್ಮದ್ ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ’ ಎಂಬ ಲೇಖನಗಳ ಸಂಕಲನವನ್ನು ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್‌ಕುಮಾರ್ ಕಲ್ಕೂರ …

Leave a Reply

Your email address will not be published. Required fields are marked *